ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಪ್ರಾತಿನಿಧಿಕ ಕಲೆಯಾಗಿ ಯಕ್ಷಗಾನಕ್ಕೆ ಮನ್ನಣೆ ಅಗತ್ಯ: ಮೋಹನ ಆಳ್ವ

ಲೇಖಕರು : ವಿಜಯ ಕರ್ನಾಟಕ
ಶುಕ್ರವಾರ, ಜೂನ್ 10 , 2016
ಜೂನ್ 10 , 2016

ಪ್ರಾತಿನಿಧಿಕ ಕಲೆಯಾಗಿ ಯಕ್ಷಗಾನಕ್ಕೆ ಮನ್ನಣೆ ಅಗತ್ಯ: ಮೋಹನ ಆಳ್ವ

ಮಂಗಳೂರು : ಒಡಿಶಾದಲ್ಲಿ ಒಡಿಸ್ಸಿ ಕಲಾಪ್ರಕಾರವನ್ನು ನೆರೆಯ ಕೇರಳದಲ್ಲಿ ಕಥಕ್ಕಳಿಯನ್ನು, ತಮಿಳುನಾಡಿನಲ್ಲಿ ತಿರುಕೂತ್ತು ಕಲೆಯನ್ನು ಪ್ರಾತಿನಿಧಿಕ ಕಲೆಯನ್ನಾಗಿ ಅಲ್ಲಿನ ಸರ್ಕಾರಗಳು ಒಪ್ಪಿಕೊಂಡಿರುವಾಗ ಕರ್ನಾಟಕದ ಪ್ರಾತಿನಿಧಿಕ ಕಲೆಯಾಗಿ ಶಾಸ್ತ್ರೀಯ ಕಲೆಯಾದ ಯಕ್ಷಗಾನಕ್ಕೆ ಮನ್ನಣೆ ನೀಡಲು ಸರ್ಕಾರ ಹಿಂದೇಟು ಹಾಕಬಾರದು ಎಂದು ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು.

ಭಾನುವಾರ ಹಿರಿಯ ಭಾಗವತರಾದ ಪದ್ಯಾಣ ಗಣಪತಿ ಭಟ್‌ ಅವರಿಗೆ ಗೌರವ ಸಲ್ಲಿಸುವ ‘ಪದಯಾನ’ ಕಾರ್ಯಕ್ರಮದಲ್ಲಿ ಮಾತನಾಡಿ, ಸರ್ಕಾರವು ಸಮರ್ಪಕವಾದ ಸಾಂಸ್ಕೃತಿಕ ನೀತಿಯನ್ನು ರೂಪಿಸಲು ವಿಳಂಬ ಮಾಡಬಾರದು ಎಂದರು.

ತೆಂಕು, ಬಡಗು ಎಂಬ ಭೇದವಿಲ್ಲದೆ ಯಕ್ಷಗಾನ ಕಲೆಯು ಹಳ್ಳಿಯಿಂದ ದಿಲ್ಲಿವರೆಗೆ ಜನಪ್ರಿಯತೆಯನ್ನು ಪಡೆದುಕೊಂಡಿದ್ದು, ವಿಸ್ತಾರವಾದ ಮತ್ತು ವೈವಿಧ್ಯವಾದ ಪ್ರೇಕ್ಷಕರನ್ನು ಹೊಂದಿದೆ. ಆದರೆ ಅದರ ಕಲಿಕೆಗೆ ಸಂಗೀತ ನೃತ್ಯದ ಕಲಿಕೆಯ ಮಾದರಿಯಲ್ಲಿ ವ್ಯವಸ್ಥೆಯನ್ನು ಇನ್ನೂ ರೂಪಿಸುವುದು ಸಾಧ್ಯವಾಗಿಲ್ಲ.

ಆದ್ದರಿಂದ ಡಿಪ್ಲೊಮಾ ಕೋರ್ಸ್‌ ಅಥವಾ ಸರ್ಟಿಫಿಕೇಟ್‌ ಕೋರ್ಸ್‌ಗಳನ್ನು ರೂಪಿಸಬೇಕಾಗಿದೆ. ಸಂಗೀತ ನೃತ್ಯದಲ್ಲಿ ಇರುವಂತೆಯೇ ಜೂನಿಯರ್‌, ಸೀನಿಯರ್‌ ವಿದ್ವತ್‌ನಂತಹ ಗ್ರೇಡ್‌ಗಳನ್ನು ನೀಡುವ ಶೈಲಿಯಲ್ಲಾದರೂ ಕಲಿಕೆಯ ವ್ಯವಸ್ಥೆ ರೂಪಿಸಬೇಕು. ಈ ನಿಟ್ಟಿನಲ್ಲಿ ಯಕ್ಷಗಾನ ಕ್ಷೇತ್ರದ ಹಿರಿಯರ, ವಿದ್ವಾಂಸರ ಸಭೆಯೊಂದನ್ನು ಸದ್ಯದಲ್ಲಿಯೇ ಕರೆಯಲಾಗುವುದು ಎಂದರು.

ಕೃಪೆ : prajavani


Share

ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ
ಪೂರಕ ಲೇಖನಗಳು
 ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ