ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ ಜಾಲ
Share
ಕಟೀಲು ಯಕ್ಷಗಾನ ತತ್ಕಾಲ್‌ ಬುಕ್ಕಿಂಗ್‌ ವ್ಯವಸ್ಥೆ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಭಾನುವಾರ, ಜೂನ್ 30 , 2013
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಐದು ಯಕ್ಷಗಾನ ಬಯಲಾಟ ಮೇಳಗಳಿದ್ದರೂ ಮುಂದಿನ 25 ವರ್ಷಗಳ ತನಕ 10,000ಕ್ಕೂ ಮಿಕ್ಕಿ ಯಕ್ಷಗಾನ ಬಯಲಾಟಗಳು ಬುಕ್ಕಿಂಗ್‌ ಆಗಿದ್ದು, ಶೀಘ್ರದಲ್ಲಿ ಹರಕೆ ಬಯಲಾಟ ನೀಡುವ ಉದ್ದೇಶದಿಂದ ತತ್ಕಾಲ್‌ ಬುಕ್ಕಿಂಗ್‌ ವ್ಯವಸ್ಥೆ ಜಾರಿಗೆ ತರುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಆಡಳಿತಾಧಿಕಾರಿ ಡಾ| ಹರೀಶ್‌ ಕುಮಾರ್‌ ತಿಳಿಸಿದ್ದಾರೆ. ಅವರು ಶನಿವಾರ ಕಟೀಲು ದೇವಳದಲ್ಲಿ ನಡೆದ ಆಡಳಿತ ಸಮಿತಿ ಸಭೆಯ ಬಳಿಕ ಮಾಹಿತಿ ನೀಡಿದರು.

ತತ್ಕಾಲ್‌ ಬುಕ್ಕಿಂಗ್‌ನಿಂದ ಬರುವ ಹೆಚ್ಚಿನ ಅದಾಯವನ್ನು ಮಕ್ಕಳಲ್ಲಿ ಯಕ್ಷಗಾನ ಕಲೆಯ ಬಗ್ಗೆ ಅಭಿರುಚಿ ಮೂಡಿಸುವ ನಿಟ್ಟಿನಲ್ಲಿ ಬಳಸಲಾಗುವುದು. ಪರಿಸರದ ಶಾಲೆಗಳಲ್ಲಿ ಯಕ್ಷಗಾನ ತರಬೇತಿ ನೀಡುವ ಕಮ್ಮಟ ಮಾಡಲಾಗುವುದು ಹಾಗೂ ಕಲಾವಿದರಿಗೂ ಹೆಚ್ಚಿನ ಸೌಲಭ್ಯಗಳನ್ನು ನೀಡಲಾಗುವುದು ಎಂದು ತಿಳಿಸಿದರು. ಕಟೀಲಿನ ಮುಖ್ಯರಸ್ತೆ ಅಗಲಗೊಳಿಸುವುದಕ್ಕೆ ಭೂಮಿ ಕಳೆದುಕೊಳ್ಳುವವರು ನ್ಯಾಯಲಯ ಮೆಟ್ಟಿಲೇರಿದ ಪರಿಣಾಮ ಹಿನ್ನಡೆಯಾಗಿದ್ದು, ಜಾಗ ಕಳೆದುಕೊಳ್ಳುವವರನ್ನು ಕರೆದು ಸಭೆ ನಡೆಸಿ ಸೌಹಾರ್ದಯುತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಮುಂದಿನ ಗುರುವಾರ ಸಭೆ ನಡೆಸಲಾಗುವುದು.

ಕೃಪೆ : http://yashakarnataka.com


Share

ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ
ಪೂರಕ ಲೇಖನಗಳು
 ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ