ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಸೀತಾನದಿ ಗಣಪಯ್ಯ ಶೆಟ್ಟಿ ಸಂಸ್ಮರಣೆ: ಪೊಲ್ಯ ಭಾಗವತರಿಗೆ ಪ್ರಶಸ್ತಿ ಪ್ರದಾನ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಮ೦ಗಳವಾರ, ಒಕ್ಟೋಬರ್ 8 , 2013
ಒಕ್ಟೋಬರ್ 8 , 2013

ಸೀತಾನದಿ ಗಣಪಯ್ಯ ಶೆಟ್ಟಿ ಸಂಸ್ಮರಣೆ: ಪೊಲ್ಯ ಭಾಗವತರಿಗೆ ಪ್ರಶಸ್ತಿ ಪ್ರದಾನ

ಪರ್ಕಳ : ಖ್ಯಾತ ಪ್ರಸಂಗಕರ್ತ, ಯಕ್ಷಗಾನ ಅರ್ಥಧಾರಿ, ಸೀತಾನದಿ ಗಣಪಯ್ಯ ಶೆಟ್ಟಿ ಅವರ 26ನೇ ವರ್ಷದ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಭಾನುವಾರ ಪರ್ಕಳದ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಿತು. ಈ ವರ್ಷದ ಸೀತಾನದಿ ಪ್ರಶಸ್ತಿಯನ್ನು ಉಭಯತಿಟ್ಟುಗಳ ಭಾಗವತ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟರಿಗೆ ಪ್ರದಾನ ಮಾಡಲಾಯಿತು.

ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಶಾನಾಡಿ ಅಜಿತ ಕುಮಾರ ಹೆಗ್ಡೆ ಅವರ ಸಮಾರಂಭದ ಅಧಕ್ಷತೆ ವಹಿಸಿದ್ದರು. ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ.ಎಂ.ಎಲ್. ಸಾಮಗ, ಉಡುಪಿ ಗೋವಿಂದ ಪೈ ಸಂಶೋಧನಾ ಕೇಂದ್ರದ ನಿರ್ದೇಶಕ ಹೆರಂಜೆ ಕೃಷ್ಣ ಭಟ್, ಮಣಿಪಾಲ ವೈಷ್ಣವಿ ದುರ್ಗಾ ದೇವಸ್ಥಾನದ ಧರ್ಮದರ್ಶಿ ಜಯರಾಜ ಹೆಗ್ಡೆ ಅತಿಥಿಗಳಾಗಿ ಆಗಮಿಸಿದ್ದರು. ಯಕ್ಷಗಾನ ವಿಮರ್ಶಕ ಎಸ್.ವಿ. ಉದಯಕುಮಾರ ಶೆಟ್ಟಿ ಅವರು ಸನ್ಮಾನಿತರನ್ನು ಅಭಿನಂದಿಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೀತಾನದಿ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನ ನೀಡಲಾಯಿತು. ವೇದಿಕೆಯಲ್ಲಿ ಸೀತಾನದಿ ಪ್ರತಿಷ್ಠಾನದ ಸದಸ್ಯರಾದ ಆತ್ರಾಡಿ ದಿಲೀಪ್ ರಾಜ ಹೆಗ್ಡೆ, ಉದ್ಯಮಿಗಳಾದ ರಾಜೀವ ಶೆಟ್ಟಿ ಕರೀಂನಗರ, ಪೊಲ್ಯ ಉಮೇಶ್ ಶೆಟ್ಟಿ, ಕಾರ್ಯಕ್ರಮ ಪ್ರಾಯೋಜಕರಾದ ಹರ್ಷವರ್ಧನ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು. ಟ್ರಸ್ಟಿನ ಉಪಾಧ್ಯಕ್ಷ ಜಯರಾಮ ಶೆಟ್ಟಿ ಸಂಸ್ಮರಣಾ ಭಾಷಣ ಮಾಡಿದರು. ಪ್ರತಿಷ್ಠಾನದ ಅಧ್ಯಕ್ಷ ಪಿ. ಕಿಶನ್ ಹೆಗ್ಡೆ ಸ್ವಾಗತಿಸಿದರು.

ಸೀತಾನದಿ ವಿಠಲ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ, ಸರ್ಪು ಸದಾನಂದ ಪಾಟೀಲ್ ವಂದಿಸಿದರು. ಬಳಿಕ ಬಡಗುತಿಟ್ಟಿನ ಕಲಾವಿದರಿಂದ ಶಶಿಪ್ರಭಾ ಪರಿಣಯ ಯಕ್ಷಗಾನ ನೆರವೇರಿತು.

ಕೃಪೆ : http://www.kannadaprabha.com


Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ