ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಚೋನಮನೆ ಶನೀಶ್ವರ ಮೇಳದ ತಿರುಗಾಟ ಆರಂಭ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಮ೦ಗಳವಾರ, ನವ೦ಬರ್ 26 , 2013
ನವ೦ಬರ್ 26 , 2013

ಚೋನಮನೆ ಶನೀಶ್ವರ ಮೇಳದ ತಿರುಗಾಟ ಆರಂಭ

ಸಿದ್ದಾಪುರ : ಯಕ್ಷಗಾನ ಮೇಳಗಳು ಜನರಲ್ಲಿ ಧಾರ್ಮಿಕ ಭಾವೈಕ್ಯ ಹಾಗೂ ಶ್ರದ್ಧಾ ಭಕ್ತ ಹೆಚ್ಚಿಸುವ ಮೂಲಕ ಜನರಲ್ಲಿ ಸಂತೃಪ್ತ ಜೀವನಕ್ಕೆ ಪ್ರೇರಣೆ ನೀಡುತ್ತಿವೆ. ಯಕ್ಷಗಾನ ಸಮಾಜಕ್ಕೆ ಉತ್ತಮ ಸಂದೇಶ ಸಾರುವ ಕಲೆಯಾ­ಗಿದ್ದು, ಪುಣ್ಯ ಕ್ಷೇತ್ರಗಳ ಅಭಿವೃದ್ಧಿ ಹಾಗೂ ಯಕ್ಷಗಾನ ಕಲೆ ಅಭಿವೃದ್ಧಿ ಪಡಿಸುವಲ್ಲಿ ಸರ್ವರ ಸಹಕಾರದ ಅಗತ್ಯವಿದೆ ಎಂದು ಮಾನಂಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ಹುಣ್ಸೆಹಾಡಿ ಬೋಜ ಶೆಟ್ಟಿ ಹೇಳಿದರು.

ಆಜ್ರಿ ಚೋನಮನೆ ಶನೀಶ್ವರ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಕ್ಷೇತ್ರದ ಯಕ್ಷಗಾನ ಮೇಳದ 6ನೇ ವರ್ಷದ ತಿರುಗಾಟದ ಪ್ರಥಮ ದೇವರ ಸೇವೆಯಾಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

74ನೇ ಉಳ್ಳೂರು ಬನಶಂಕರಿ ದೇವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಮೂಕ್ತೇಸರ ಸಂಜೀವ ಶೆಟ್ಟಿ ಸಂಪಿಗೇಡಿ ಅಧ್ಯಕ್ಷತೆ ವಹಿಸಿದ್ದರು.

ಬೆಂಗಳೂರಿನ ಉದ್ಯಮಿ ಹೆಬ್ಬಾಡಿ ಸಂತೋಷ ಶೆಟ್ಟಿ, ಪತ್ರಕರ್ತ ಭಾಸ್ಕರ ಶೆಟ್ಟಿ ನೇರಳಕಟ್ಟೆ, ಆಜ್ರಿ ಚೋನಮನೆ, ಕ್ಷೇತ್ರದ ಆಡಳಿತ ಧರ್ಮದರ್ಶಿ, ಯಕ್ಷಗಾನ ಮೇಳದ ವ್ಯವಸ್ಥಾಪಕ ಅಶೋಕ ಶೆಟ್ಟಿ ಚೋನಮನೆ, ಸಂಚಾಲಕ ಸದಾನಂದ ಭಂಡಾರಿ ಮುಖ್ಯ ಅತಿಥಿಗಳಾಗಿದ್ದರು.

ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಕಮಲಶಿಲೆ ಮತ್ತು ಸರ್ಕಾರಿ ಪ್ರೌಢಶಾಲೆ ಸಿದ್ದಾಪುರ ಆಜ್ರಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಗಣಪತಿಗೆ ಹೋಮ, ಮಹಾಮಂಗಳಾರತಿ, ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ, ರಾಜಾ ಸತ್ಯವೃತ ಯಕ್ಷಗಾನ ಸೇವೆ ನಡೆಯಿತು.

ಎಸ್‌.ಜಿ.ನಾಯ್ಕ ಸಿದ್ದಾಪುರ ಸ್ವಾಗತಿಸಿ, ಭುಜಂಗ ಶೆಟ್ಟಿ ಹೆನ್ನಾಬೈಲು ಕಾರ್ಯಕ್ರಮ ನಿರೂಪಿಸಿದರು. ಆಜ್ರಿ ಚೋನಮನೆ ಕ್ಷೇತ್ರದ ಆಡಳಿತ ಧರ್ಮದರ್ಶಿ, ಯಕ್ಷಗಾನ ಮೇಳದ ವ್ಯವಸ್ಥಾಪಕ ಅಶೋಕ ಶೆಟ್ಟಿ ಚೋನಮನೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶರತ್ ಶೆಟ್ಟಿ ಸಿದ್ದಾಪುರ ವಂದಿಸಿದರು.

ಕೃಪೆ : http://prajavani.net


Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ