ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಆಳ್ವಾಸ್ ವಿಶ್ವನುಡಿಸಿರಿ : ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಭಾನುವಾರ, ಡಿಸೆ೦ಬರ್ 1 , 2013
ಡಿಸೆ೦ಬರ್ 1, 2013

ಆಳ್ವಾಸ್ ವಿಶ್ವನುಡಿಸಿರಿ : ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ

ಮೂಡುಬಿದಿರೆ : ಪದ್ಯದ ಅರ್ಥವನ್ನು ಸರಿಯಾಗಿ ತಿಳಿದುಕೊಂಡು, ಅದಕ್ಕೆ ಸರಿಯಾದ ಅಭಿನಯ, ನಾಟ್ಯ ಮದ್ದಲೆಗಳನ್ನು ಕಲಿಯಬೇಕು. ಕುಣಿತದಲ್ಲಿ ಲಾಲಿತ್ಯವಿರಬೇಕು. ಜನರಿಗೆ ಮುಟ್ಟುವಂತೆ ಅಭಿನಯಿಸಬೇಕು. ಹೀಗಾದಾಗ ಯಕ್ಷಗಾನ ಜನಾಕರ್ಷಣೆ ಪಡೆಯಲು ಸಾಧ್ಯ ಎಂದು ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯ ಭಾಗವತ ಬಲಿಪ ನಾರಾಯಣ ಭಾಗವತರು ಹೇಳಿದರು.

ಆಳ್ವಾಸ್ ವಿಶ್ವನುಡಿಸಿರಿ ವಿರಾಸತ್ ಅಂಗವಾಗಿ ಆಳ್ವಾಸ್ ೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರವು ಸಮಾಜ ಮಂದಿರದಲ್ಲಿ ಆಯೋಜಿಸಿರುವ ಮೂರು ದಿನಗಳ ತೆಂಕು ತಿಟ್ಟು ಯಕ್ಷಗಾನ ಸ್ಪರ್ಧೆಯನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದೆ ಯಕ್ಷಗಾನ ದೀನ ಸ್ಥಿತಿಯಲ್ಲಿದ್ದರೂ ಯಕ್ಷಗಾನ ವಿದ್ವಾಂಸರು ಹೆಚ್ಚಿದ್ದರು. ಕಲಿಕಾ ಕೇಂದ್ರಗಳಿರಲಿಲ್ಲ. ಒಂದು ಊರಿನಿಂದ ಮತ್ತೊಂದು ಊರಿಗೆ ಹೋಗುವಾಗ ಕುಣಿಯುತ್ತಲೇ ಯಕ್ಷಗಾನ ಕಲಿಯುತ್ತಿದ್ದರು. ಈಗ ಶಾಲೆ ಕಾಲೇಜುಗಳಲ್ಲಿ ಯಕ್ಷಗಾನ ಅಧ್ಯಯನ ಕೇಂದ್ರಗಳನ್ನು ತೆರೆಯುವ ಮೂಲಕ ಈ ಕಲೆ ಜನಪ್ರಿಯಗೊಳ್ಳುತ್ತಿದೆ. ಇಲ್ಲಿ ಕಲಿತವರು ಯಕ್ಷಗಾನದಲ್ಲೇ ಉಳಿಯುವುದು ವಿರಳ. ಶಾಲಾ ಕಾಲೇಜುಗಳಲ್ಲಿ ಯಕ್ಷಗಾನ ಕಲಿಸುವವರು ಶ್ರದ್ಧೆಯಿಂದ ಕಲೆಗೆ ಅಪಚಾರವಾಗದಂತೆ ಕಲಿಸಬೇಕು ಎಂದರು.

ಶುಭಾಶಂಸನೆ ಮಾಡಿದ ಅಲಂಗಾರು ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಈಶ್ವರ ಭಟ್ ಮಾತನಾಡಿ, ಯಕ್ಷಗಾನ ನ್ಯೂನತೆಗಳಿಲ್ಲದ ಕಲೆ. ಇದಕ್ಕೆ ಸರಿಸಮಾನವಾದ ಕಲೆ ಬೇರೊಂದಿಲ್ಲ. ಯಕ್ಷಗಾನ ಸ್ಪರ್ಧೆಗಳು ಹೊಸ ಪೀಳಿಗೆಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಸಹಕಾರಿಯಾಗುತ್ತದೆ ಎಂದರು.

ಧನಲಕ್ಷ್ಮೀ ಉದ್ಯಮ ಸಮೂಹದ ಆಡಳಿತ ನಿರ್ದೇಶಕ ಕೆ.ಶ್ರೀಪತಿ ಭಟ್ ಅಧ್ಯಕ್ಷತೆ ವಹಿಸಿದ್ದರು. ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್ ರಾಮ್ ಸುಳ್ಯ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಸದಾಶಿವ ಶೆಟ್ಟಿಗಾರ್, ವಿಶ್ವ ನುಡಿಸಿರಿ ವಿರಾಸತ್ ಯಕ್ಷಗಾನ ಸಮಿತಿಯ ಅಧ್ಯಕ್ಷ ದೇವಾನಂದ ಭಟ್ ಉಪಸ್ಥಿತರಿದ್ದರು. ಉಪನ್ಯಾಸಕ ಟಿ.ಎ.ಎನ್.ಖಂಡಿಗೆ ಸ್ವಾಗತಿಸಿದರು. ಗುರುಪ್ರಸಾದ್ ವಂದಿಸಿದರು. ಉಪನ್ಯಾಸಕ ಡಾ.ಯೋಗೀಶ್ ಕೈರೋಡಿ ಕಾರ್ಯಕ್ರಮ ನಿರ್ವಹಿಸಿದರು.

ಕೃಪೆ : http://vijaykarnataka.indiatimes.com/


Share

ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ
ಪೂರಕ ಲೇಖನಗಳು
 ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ