ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ ಜಾಲ
Share
ಕಲಾ ಕದ೦ಬ ಉತ್ಸವ - 2014

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಶುಕ್ರವಾರ, ಆಗಸ್ಟ್ 15 , 2014
ಬೆಂಗಳೂರಿನ ಕಲಾಕದಂಬ ಆರ್ಟ್ ಸೆಂಟರ್ ಸಂಸ್ಥೆ ಪ್ರತಿ ವರ್ಷ ಯಕ್ಷಗಾನ ಕ್ಷೇತ್ರದ ಪ್ರತಿಭಾನ್ವಿತರೋರ್ವರಿಗೆ ಪ್ರಶಸ್ತಿಯನ್ನು ನೀಡುತಿದ್ದು, ಈ ಬಾರಿಯ “ಕಾಳಿಂಗ ನಾವಡ ಪ್ರಶಸ್ತಿ-೨೦೧೪” ಪ್ರಶಸ್ತಿಯನ್ನು, ವೃತ್ತಿಪರ ಯಕ್ಷಗಾನದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ, ಹಿರಿಯ ಭಾಗವತ ನೆಬ್ಬೂರು ನಾರಾಯಣ ಹೆಗಡೆ ಅವರನ್ನು ಆಯ್ಕೆ ಮಾಡಿದೆ. ಆಗಸ್ಟ್ ೧೭ ರಂದು ಸಂಜೆ ೬ಕ್ಕೆ ಹನುಮಂತನಗರದ ಕೆ.ಹೆಚ್. ಕಲಾಸೌಧದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವತ ನೆಬ್ಬೂರು ನಾರಾಯಣ ಹೆಗಡೆಯವರನ್ನು ೧೦ ಸಾವಿರ ನಗದು ಹಣ, ಪ್ರಶಸ್ತಿ ಪತ್ರ, ಸ್ಮರಣಿಕೆ ನೀಡಿ ಗೌರವಿಸಲಾಗುವುದು ಎಂದು ಸಂಸ್ಥೆಯ ನಿರ್ದೇಶಕರಾದ ರಾಧಾಕೃಷ್ಣ ಉರಾಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೆಬ್ಬೂರರಿಗೂ ಪ್ರಿಯವಾದ ದಮಯಂತಿ ಪುನರ್ ವಿವಾಹ (ರಚನೆ: ಧ್ವಜಪುರದ ನಾಗಪ್ಪಯ್ಯ) ಯಕ್ಷಗಾನ ಪ್ರದರ್ಶನ ಕೂಡಾ ಅಂದು ನಡೆಯಲಿದೆ.

ಭಾಗವತ ನೆಬ್ಬೂರು ನಾರಾಯಣ ಹೆಗಡೆ

ಕಾಳಿಂಗ ನಾವಡ ಪ್ರಶಸ್ತಿ

ಯಕ್ಷಗಾನ ಭಾಗವತಿಕೆಯ ಸ್ಥಾನಕ್ಕೆ ತಾರಾಮೆರುಗು ತಂದುಕೊಟ್ಟ ಕಾಳಿಂಗ ನಾವಡ ಯಕ್ಷಗಾನ ಪ್ರಪಂಚ ಮರೆಯದ ಹೆಸರು. ನಾರ್ಣಪ್ಪ ಉಪ್ಪೂರರ ಶಿಷ್ಯರಾಗಿ ಮೂವತ್ತೆರಡನೇ ವಯಸ್ಸಿಗೇ ಪ್ರಶಂಸೆಯ ಗಿರಿಯೇರಿ, ಮೆರೆದು ಮರೆಯಾದವರು. ಕುಳಿತು ಕಲಿಸಿ ಶಿಷ್ಯರನ್ನು ಸಿದ್ಧಮಾಡದಿದ್ದರೂ ತಮ್ಮ ಗಾನ ಮೋಡಿಯಿಂದ ನೂರಾರು ಮಂದಿಯನ್ನು ಭಾಗವತಿಕೆಗೆ ಪ್ರೇರೇಪಿಸಿದ ಶಕ್ತಿ. ತಂದೆ ರಾಮಚಂದ್ರ ನಾವಡ, ತಮ್ಮ ವಿಶ್ವನಾಥ ನಾವಡ ಕೂಡಾ ಭಾಗವತಿಕೆಗೆ ಹೆಸರಾಗಿದ್ದು ಗುಂಡ್ಮಿ ಎಂದರೆ ನಾವಡರ ಮನೆ ಎಂಬ ರೀತಿ ಗುರ್ತಿಸುವಂತೆ ಮಾಡಿದ ಭಾಗವತರ ಮನೆ ಮನದಲ್ಲಿ ಈಗ ಯಕ್ಷರ ಗಾನ ಮೌನವಾಗಿದೆ. ನೆನಪು ನಿರಂತರವಾಗಿದೆ.

ಈ ಯಕ್ಷಲೋಕದ ಗಾನದೇವತೆಯ ನೆನಪಿನಲ್ಲಿ ಬೆಂಗಳೂರಿನ ಕಲಾಕದಂಬ ಆರ್ಟ್ ಸೆಂಟರ್ ಪ್ರತೀ ವರ್ಷ ಯಕ್ಷ ಸಾಧಕರೊಬ್ಬರಿಗೆ ಕಾಳಿಂಗ ನಾವಡ ಪ್ರಶಸ್ತಿ ನೀಡುತ್ತಿದೆ. ಹತ್ತು ಸಾವಿರ ನಗದು ಹಣ, ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆಯನ್ನು ಕಾಳಿಂಗ ನಾವಡ ಪ್ರಶಸ್ತಿ ಒಳಗೊಂಡಿರುತ್ತದೆ.

ಹೊಟ್ಟೆಪಾಡಿಗಾಗಿ ಊರು ಬಿಟ್ಟು, ಹೋಟೇಲ್ ಮಾಣಿಯಾಗಿದ್ದ ಕಾಳಿಂಗನನ್ನು ಮರಳಿ ಕರೆತಂದು ಭಾಗವತ ಕಾಳಿಂಗ ನಾವಡರನ್ನಾಗಿಸಿದವರು ಐರೋಡಿ ಸದಾನಂದ ಹೆಬ್ಬಾರರು ಮತ್ತು ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರ. ಗುಂಡ್ಮಿ ಸದಾನಂದ ಐತಾಳ್, ಸುಬ್ರಹ್ಮಣ್ಯ ಧಾರೇಶ್ವರ್, ಕೆಪ್ಪೆಕೆರೆ ಸುಬ್ರಾಯ ಹೆಗಡೆ, ಎಳ್ಳಾರೆ ವೆಂಕಟ್ರಾಯ ನಾಯಕ್ ಈಗಾಗಲೇ ಕಾಳಿಂಗ ನಾವಡ ಪ್ರಶಸ್ತಿಗೆ ಬಾಜನರಾಗಿದ್ದು ಈ ವರ್ಷದ ಕಾಳಿಂಗ ನಾವಡ ಪ್ರಶಸ್ತಿಯನ್ನು ನೆಬ್ಬೂರು ನಾರಾಯಣ ಹೆಗಡೆಯವರಿಗೆ ನೀಡಲಿದೆ.ಸ೦ಪೂರ್ಣ ವಿವರ...Share

ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ
ಪೂರಕ ಲೇಖನಗಳು
 ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ