ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
16ರಂದು ಬಣ್ಣದ ವೇಷಧಾರಿಗಳ ಸಮ್ಮಿಲನ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಶುಕ್ರವಾರ, ನವ೦ಬರ್ 7 , 2014
ನವ೦ಬರ್ 7, 2014

16ರಂದು ಬಣ್ಣದ ವೇಷಧಾರಿಗಳ ಸಮ್ಮಿಲನ

ಉಡುಪಿ : ಉಡುಪಿಯ ಯಕ್ಷಗಾನ ಕಲಾರಂಗದ ಆಶ್ರಯದಲ್ಲಿ ಯಕ್ಷಗಾನದ ದೈತ್ಯ ಪ್ರತಿಭೆ ಬಣ್ಣದ ಮಹಾಲಿಂಗ ಅವರ ಶತಮಾನದ ಸಂಸ್ಮರಣಾರ್ಥ ಒಂದು ದಿನದ ಬಣ್ಣದ ವೇಷಧಾರಿಗಳ ಸಮ್ಮಿಲನ 'ಬಣ್ಣದ ಬಿನ್ನಾಣ' ಹಾಗೂ ಬಣ್ಣದ ವೇಷದ ಛಾಯಾಚಿತ್ರ ಪ್ರದರ್ಶನ ನ.16ರಂದು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ. ಯಕ್ಷಗಾನ ಕಲಾರಂಗದ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕಾರ್ಯಕ್ರಮವನ್ನು ಬೆಳಗ್ಗೆ 10ಗಂಟೆಗೆ ಪ್ರಸಿದ್ಧ ಹೃದಯ ತಜ್ಞ ಡಾ.ಪದ್ಮನಾಭ ಕಾಮತ್ ಉದ್ಘಾಟಿಸಲಿದ್ದಾರೆ. ರಾಜ್ಯ ಯಕ್ಷಗಾನ ಬಯಲಾಟ ಅಕಾಡೆಮಿ ಸದಸ್ಯ ಕಿಶನ್ ಹೆಗ್ಡೆ ಉಪಸ್ಥಿತರಿರುವರು. ಅಪರಾಹ್ನ 2ಗಂಟೆಯಿಂದ ನಡೆಯುವ ಬಣ್ಣದ ವೇಷದ ಮುಖವರ್ಣಿಕೆಯ ಪ್ರಸ್ತುತಿಯಲ್ಲಿ ಸುಮಾರು ತೆಂಕುತಿಟ್ಟಿನ ಸುಮಾರು 40 ಮಂದಿ ಬಣ್ಣದ ವೇಷಧಾರಿಗಳು ಭಾಗವಹಿಸುವರು. ಹಿರಿಯ ಕಲಾವಿದರುಗಳಾದ ದೇವಕಾನ ಕಷ್ಣ ಭಟ್, ಕೆ.ಗೋವಿಂದ ಭಟ್, ಬನ್ನಂಜೆ ಸಂಜೀವ ಸುವರ್ಣ, ಪದ್ಯಾಣ ಶಂಕರನಾರಾಯಣ ಭಟ್ ಅವರ ಉಪಸ್ಥಿತಿಯಲ್ಲಿ ಈ ಪ್ರಸ್ತುತಿ ನಡೆಯಲಿದೆ.

ಬೆಳಗ್ಗೆ 11ಕ್ಕೆ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಬೆಂಗಳೂರಿನ ರಾಮಕೃಷ್ಣ ಕನ್ನರ್ಪಾಡಿಯವರಿಂದ 'ಪ್ರಸಾಧನ ಮತ್ತು ರಂಗಭೂಮಿ' ವಿಷಯದ ಕುರಿತು ಉಪನ್ಯಾಸ ಹಾಗೂ 'ಯಕ್ಷಗಾನದಲ್ಲಿ ಬಣ್ಣದ ವೇಷಗಳು ಮತ್ತು ವೇಷಧಾರಿಗಳು 'ಎಂಬ ವಿಷಯದಲ್ಲಿ ಡಾ.ಕೋಳ್ಯೂರು ರಾಮಚಂದ್ರ ರಾವ್, ಕೋಟ ಶ್ರೀಧರ ಹಂದೆ, ಬಲಿಪ ನಾರಾಯಣ ಭಾಗವತ ಹಾಗೂ ಕೆ. ಸದಾಶಿವ ಸಂವಾದ ನಡೆಸಲಿದ್ದಾರೆ.

ಸಂಜೆ 5ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಪರ್ಯಾಯ ಕಾಣಿಯೂರು ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಅವರು ಅನುಗ್ರಹ ಸಂದೇಶ ನೀಡುವರು. ಮಂಗಳೂರು ವಿವಿಯ ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಕೆ.ಚಿನ್ನಪ್ಪ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕುರಿಯ ಗಣಪತಿ ಶಾಸ್ತ್ರಿ ಅವರು ಬಣ್ಣದ ವೇಷದ ಮಹಾಲಿಂಗರ ಸಂಸ್ಮರಣೆ ಮಾಡಲಿದ್ದಾರೆ. ಯಕ್ಷಗಾನ ಬಯಲಾಟ ಅಕಾಡೆಮಿ ಸದಸ್ಯ ಕೆ.ಎಂ ಶೇಖರ ಉಪಸ್ಥಿತ ರಿರವರು. ಸಂಜೆ 6 ಗಂಟೆಯಿಂದ ಆಯ್ದ ವೇಷಗಳ ಪ್ರಾತ್ಯಕ್ಷಿಕೆ,ಪ್ರದರ್ಶನ ನಡೆಯಲಿದೆ. ಯಕ್ಷಗಾನ ಕಲಾರಂಗದ ಪದಾಧಿಕಾರಿಗಳಾದ ಮುರಳಿ ಕಡೆಕಾರ್, ಗಣೇಶ್ ರಾವ್,ಎಸ್.ವಿ.ಭಟ್, ಗಂಗಾಧರ ರಾವ್, ಎಎಚ್.ಎನ್. ಶೃಂಗೇಶ್ವರ್ ಉಪಸ್ಥಿತರಿದ್ದರು.

ಛಾಯಾಗ್ರಾಹಕರಿಗೆ ಸ್ಪರ್ಧೆ: ಯಕ್ಷಗಾನದ ಬಣ್ಣದ ವೇಷಧಾರಿಗಳು ಹಾಗೂ ಮುಖವರ್ಣಿಕೆಯ ಛಾಯಾಚಿತ್ರಗಳ ಕೊರತೆಯಾಗಬಾರದು ಎಂಬ ಉದ್ದೇಶದಿಂದ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಆಸಕ್ತ ಫೋಟೊಗ್ರಾಫರ್ಸ್‌ಗಳು ಅಂದು ಬೆಳಗ್ಗಿನಿಂದ ಸಾಯಂಕಾಲದವರೆಗಿನ ದೃಶ್ಯಗಳನ್ನು ಕೆಮರಾದಲ್ಲಿ ಸೆರೆಹಿಡಿದು, ತಮ್ಮ ಉತ್ತಮ 2 ಫೋಟೊಗಳನ್ನು ಯಕ್ಷಗಾನ ಕಲಾರಂಗಕ್ಕೆ ನ.20ರೊಳಗೆ ತಲುಪಿಸಬೇಕು. ಉತ್ತಮ ಛಾಯಾಚಿತ್ರಗಳಿಗೆ ಪ್ರಥಮ ಬಹುಮಾನ 5,000ರೂ, ದ್ವಿತೀಯ 3,000ರೂ. ಹಾಗೂ ತೃತೀಯ ಬಹುಮಾನವಾಗಿ 2,000ರೂ.ನಗದು ಬಹುಮಾನವನ್ನು ನೀಡಲಾಗುವುದು.

ಕೃಪೆ : http://www.vijaykarnataka.com

Share

ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ
ಪೂರಕ ಲೇಖನಗಳು
 ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ