ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಅರುವ ಕೊರಗಪ್ಪ ಶೆಟ್ಟರಿಗೆ ಸಾಮಗ ಪ್ರಶಸ್ತಿ ಪ್ರದಾನ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಸೋಮವಾರ, ಫೆಬ್ರವರಿ 23 , 2015
ಫೆಬ್ರವರಿ 23, 2015

ಅರುವ ಕೊರಗಪ್ಪ ಶೆಟ್ಟರಿಗೆ ಸಾಮಗ ಪ್ರಶಸ್ತಿ ಪ್ರದಾನ

ಶಿರಸಿ : ತುಳು ಕೂಟ ಉಡುಪಿ ವತಿಯಿಂದ 3ನೇ ವರ್ಷದ ಮಲ್ಪೆ ರಾಮದಾಸ ಸಾಮಗ ನೆನಪಿನ ಯಕ್ಷಗಾನ ಪ್ರಶಸ್ತಿಯನ್ನು ಪ್ರಸಿದ್ಧ ಯಕ್ಷಗಾನ ಕಲಾವಿದ ಅರುವ ಕೊರಗಪ್ಪ ಶೆಟ್ಟಿ ಅವರಿಗೆ ಭಾನುವಾರ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ 'ಮಲ್ಪೆ ರಾಮದಾಸ ಸಾಮಗೆರೆ ನೆಂಪುದ ಯಕ್ಷಗಾನ ಪರ್ಬ'ದ ಸಮಾರೋಪ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅರುವ ಕೊರಗಪ್ಪ ಶೆಟ್ಟಿ ಅವರು, ಕರ್ನಾಟಕ ಮೇಳದಲ್ಲಿ ತನ್ನ 31ವರ್ಷಗಳ ಯಕ್ಷಗಾನ ಸೇವೆಯಲ್ಲಿ ಒದಗಿದ ಮಲ್ಪೆ ರಾಮದಾಸ ಸಾಮಗ, ಮಿಜಾರು ಅಣ್ಣಪ್ಪ, ಡಾ.ಕೋಳ್ಯೂರು ರಾಮಚಂದ್ರ ರಾವ್ ಅವರಂತಹ ಯಕ್ಷಗಾನ ದಿಗ್ಗಜರುಗಳ ಕೂಟದ ಸಹವಾಸವೇ ತನ್ನ ಸಾಧನೆಗೆ ಕಾರಣವಾಯಿತು ಎಂದರು.

ಅಭಿನಂದನಾ ಭಾಷಣ ಮಾಡಿದ ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್, 61ವರ್ಷಗಳ ಕಾಲ ಯಕ್ಷಗಾನ ರಂಗದಲ್ಲಿ ಮಿಂಚುತ್ತಿರುವ ಅರುವ ಕೊರಗಪ್ಪ ಶೆಟ್ಟಿ ಅವರು ಯಕ್ಷಗಾನ ರಂಗದ ಮೇಲೂ ಹಾಗೂ ಕೆಳಗೂ ತನ್ನ ಛಾಪನ್ನು ಉಳಿಸಿಕೊಂಡವರು. ಯಾವುದೇ ದುಶ್ಚಟ ಹೊಂದದೆ, ಖಳ ಹಾಗೂ ನಾಯಕನ ಪಾತ್ರವನ್ನು ಲೀಲಾಜಾಲವಾಗಿ ಪ್ರೇಕ್ಷಕರ ಮನಮುಟ್ಟುವಂತೆ ಅಭಿನಯಿಸಿ ಮಿಂಚಿದವರು. ತನ್ನ ಬದುಕನ್ನೇ ಯಕ್ಷಗಾನಕ್ಕೆ ಮುಡಿಪಾಗಿಟ್ಟ ಈ ಮಹಾನ್ ಕಲಾವಿದನಿಗೆ ಸುಮಾರು 30 ವರ್ಷ ಒಡನಾಡಿಯಾಗಿದ್ದ ಸಾಮಗರ ನೆನಪಿನ ಪ್ರಶಸ್ತಿ ಅರ್ಹವಾಗಿಯೇ ಸಂದಿದೆ ಎಂದರು.

ರಾಜ್ಯ ಯಕ್ಷಗಾನ ಬಯಲಾಟ ಅಕಾಡೆಮಿ ಸದಸ್ಯ ಪಿ.ಕಿಶನ್ ಹೆಗ್ಡೆ ಮಾತನಾಡಿ, ಮಲ್ಪೆ ರಾಮದಾಸ ಸಾಮಗರು ಯಕ್ಷಗಾನಕ್ಕೆ ಸಂಬಂಧಪಟ್ಟಂತೆ ಎಲ್ಲಕ್ಕೂ ಸಿದ್ಧರಾಗಿದ್ದ ಅಪರೂಪದ ಕಲಾವಿದರಾಗಿದ್ದರು. ಕೋಳ್ಯೂರು, ಮಿಜಾರು, ಅರುವ, ಸಾಮಗರಂತಹ ಹಿರಿಯ ಕಲಾವಿದರು ತನ್ನ ಮೇಳದಲ್ಲಿ ಸೇವೆ ಸಲ್ಲಿಸುತ್ತಿದ್ದರೆಂಬುದೇ ತನಗೆ ಹೆಮ್ಮೆ ತರುವ ವಿಚಾರ ಎಂದರು.

ಅಧ್ಯಕ್ಷತೆಯನ್ನು ತುಳು ಕೂಟದ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ವಹಿಸಿದ್ದರು. ಸಂಸ್ಥೆಯ ಗೌರವಾಧ್ಯಕ್ಷ ಡಾ.ಭಾಸ್ಕರಾನಂದ ಕುಮಾರ್, ಕೋಶಾಧಿಕಾರಿ ಎಂ.ಜಿ.ಚೈತನ್ಯಉಪಸ್ಥಿತರಿದ್ದರು. ತುಳುಕೂಟದ ಯಕ್ಷಗಾನ ಸಮಿತಿಯ ಸಂಚಾಲಕ ತಲ್ಲೂರು ಶಿವರಾಮ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಗಂಗಾಧರ ಕಿದಿಯೂರು ವಂದಿಸಿದರು.ನಾಗರಾಜ ಬಿ.ಎಸ್.ಕಾರ್ಯಕ್ರಮ ನಿರೂಪಿಸಿದರು.





ಕೃಪೆ : http://vijaykarnataka.com

Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ