ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಹಿರಿಯ ವಿದ್ವಾಂಸ ಪ್ರೊ.ಎಂ.ಎ. ಹೆಗಡೆಗೆ ಪ್ರಶಸ್ತಿ: ಸಂತಸ

ಲೇಖಕರು : ಪ್ರಜಾವಾಣಿ
ಮ೦ಗಳವಾರ, ಸೆಪ್ಟೆ೦ಬರ್ 22 , 2015
ಸೆಪ್ಟೆ೦ಬರ್ 22, 2015

ಹಿರಿಯ ವಿದ್ವಾಂಸ ಪ್ರೊ.ಎಂ.ಎ. ಹೆಗಡೆಗೆ ಪ್ರಶಸ್ತಿ: ಸಂತಸ

ಶಿರಸಿ : ಹಿರಿಯ ವಿದ್ವಾಂಸ ಪ್ರೊ. ಎಂ.ಎ.ಹೆಗಡೆ ಅವರ ‘ಭಾರತೀಯ ದರ್ಶನ ಮತ್ತು ಭಾಷೆ’ ಕೃತಿಗೆ ರಾಜ್ಯ ಸಾಹಿತ್ಯ ಅಕಾಡೆಮಿಯ ಪುಸ್ತಕ ವಿಭಾಗಕ್ಕೆ ನೀಡುವ ಅತ್ಯುತ್ತಮ ಗ್ರಂಥ ಪುರಸ್ಕಾರ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ₹ 5 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.

ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ನವೆಂಬರ್ 7ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಆಗಲಿದೆ. ಮೂಲತಃ ಹೆಗ್ಗರಣಿ ಸಮೀಪದ ಜೋಗಿನಮನೆಯ ಅಣ್ಣಪ್ಪ ಹೆಗಡೆ ಹಾಗೂ ಕಾಮಾಕ್ಷಿ ದಂಪತಿ ಪುತ್ರ ಎಂ.ಎ. ಹೆಗಡೆ ಅವರು ಹೆಗ್ಗರಣಿ, ಶಿರಸಿ ಹಾಗೂ ಧಾರವಾಡಗಳಲ್ಲಿ ಶಿಕ್ಷಣ ಪಡೆದು ಸಂಸ್ಕೃತದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಹುಬ್ಬಳ್ಳಿ ಹಾಗೂ ಸಿದ್ದಾಪುರದಲ್ಲಿ ಪ್ರಾಧ್ಯಾಪಕರಾಗಿ, ಪ್ರಾಚಾರ್ಯ ರಾಗಿ ಕೆಲಸ ಮಾಡಿದ್ದಾರೆ.

ಪ್ರಸ್ತುತ ಶಿರಸಿಯಲ್ಲಿ ನೆಲಸಿರುವ ಎಂ.ಎ. ಹೆಗಡೆ ಅವರು ಕನ್ನಡ ಹಾಗೂ ಸಂಸ್ಕೃತ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ.

ಭಾರತೀಯ ತತ್ವಶಾಸ್ತ್ರ ಪ್ರವೇಶ, ಅಲಂಕಾರತತ್ವ ಭಾರತೀಯ ದರ್ಶನಗಳು ಮತ್ತು ಭಾಷೆ, ಪ್ರಮಾಣ ಪರಿಚಯ, ಹಿಂದೂ ಸಂಸ್ಕಾರಗಳು ಮೊದಲಾದ ಸ್ವತಂತ್ರ ಕೃತಿಗಳನ್ನು ರಚಿಸಿದ್ದಾರೆ. ಭಗವದ್ಭಕ್ತಿ ರಸಾಯನಂ, ಸಿದ್ಧಾಂತ ಬಿಂದು, ಪರಮಾನಂದ ಸುಧಾ, ಅಭಿನಯ ದರ್ಪಣ, ಶಬ್ದ ಮತ್ತು ಜಗತ್ತು, ಧ್ವನ್ಯಾಲೋಕ ಮತ್ತು ಲೋಚನ ಮುಂತಾದ ಕೃತಿಗಳನ್ನು ಅನುವಾದಿಸಿದ್ದಾರೆ.

ಯಕ್ಷಗಾನದಲ್ಲಿ ಬಾಲ್ಯದಿಂದಲೂ ಆಸಕ್ತಿ ಹೊಂದಿದ್ದ ಅವರು, ಕೆರೆಮನೆ ಶಂಭು ಹೆಗಡೆ ಅವರಲ್ಲಿ ನೃತ್ಯಾಭ್ಯಾಸ ಮಾಡಿದ್ದಾರೆ. ಈಗಲೂ ತಾಳಮದ್ದಲೆ ಅರ್ಥಧಾರಿಕೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದಾರೆ. ಅವರಿಗೆ ಪ್ರಶಸ್ತಿ ಲಭಿಸಿದ್ದಕ್ಕೆ ಸ್ಥಳೀಯ ಸಾಹಿತಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.


ಕೃಪೆ : prajavani

Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ