ಹುಡುಕಿ :   
ಯಕ್ಷಗಾನ
ಲೇಖನಗಳು
ಸ೦ದರ್ಶನಗಳು
ಸುದ್ದಿ ಜಾಲ
ಸುದ್ದಿ-ಸಮುಚ್ಛಯ
ಸ೦ಘಗಳು
ಪ್ರಸ೦ಗಗಳು
ಪುಸ್ತಕಗಳು
ಮೇಳಗಳು
ಹಾಡುಗಳು
ತಾಳಮದ್ದಲೆ
ದೃಶ್ಯಾವಳಿ
ವ್ಯಕ್ತಿ ವಿಶೇಷ
ಭಾಗವತರು
ಅರ್ಥಧಾರಿಗಳು
ಪುರುಷ ಪಾತ್ರಧಾರಿಗಳು
ಸ್ತ್ರೀ ಪಾತ್ರಧಾರಿಗಳು
ಹಿಮ್ಮೇಳ ವಾದಕರು
ಹಾಸ್ಯಗಾರರು
ತರಬೇತಿ
ನಮ್ಮ ಬಗ್ಗೆ ಮುಖಪುಟ
 
ಸುದ್ದಿ - ಸಮುಚ್ಛಯ
Share
ಯಕ್ಷಗಾನ ಕಲಾವಿದ ದಿವಾಕರ್ ದಾಸ್ ಗೆ ರಾಜ್ಯೋತ್ಸವ ಪ್ರಶಸ್ತಿ

ಲೇಖಕರು :
ಸತೀಶ್ ನಾಯಕ್ , ಪಕಳಕು೦ಜ
ಭಾನುವಾರ, ನವ೦ಬರ್ 1 , 2015
ನವೆ೦ಬರ್ 1, 2015

ಯಕ್ಷಗಾನ ಕಲಾವಿದ ದಿವಾಕರ್ ದಾಸ್ ಗೆ ರಾಜ್ಯೋತ್ಸವ ಪ್ರಶಸ್ತಿ

ಬಂಟ್ವಾಳ : ತಾಲೂಕು ಕಾವಳಮೂಡೂರು ಗ್ರಾಮದ ಕಾವಳಕಟ್ಟೆ ಶೃತಿ ಆರ್ಟ್ಸ್ ಸಂಸ್ಥೆಯ ಸಂಸ್ಥಾಪಕ, ಯಕ್ಷಗಾನ ಕಲಾವಿದ, ಸಂಘಟಕ ದಿವಾಕರ ದಾಸ್ ಕಾವಳಕಟ್ಟೆ ಅವರಿಗೆ ಪ್ರಸಕ್ತ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ.

ಕಳೆದ 30 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ಕಲಾವಿದನಾಗಿ, ತರಬೇತುದಾರನಾಗಿ, ಯಕ್ಷಗಾನ ಸಂಘಟಕನಾಗಿ, ತಲಕಲ, ಕಾಂತಾವರ, ಸುರತ್ಕಲ್, ಮಂಗಳಾದೇವಿ ಮೇಳಗಳಲ್ಲಿ 14 ವರ್ಷ ಸ್ತ್ರೀ ವೇಷದಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 1999ರಲ್ಲಿ ಕಾವಳಕಟ್ಟೆಯಲ್ಲಿ ಶೃತಿ ಆರ್ಟ್ಸ್ ಕಲಾ ಸಂಸ್ಥೆ ಸ್ಥಾಪಿಸಿ ಕಲಾ ಪ್ರದರ್ಶನಗಳಿಗೆ ಬೇಕಾದ ವೇಷಭೂಷಣ ತಯಾರಿಸಿ, ಕರ್ನಾಟಕ ರಾಜ್ಯದ ಬಹುತೇಕ ಪ್ರಸಾದನ ಸಂಸ್ಥೆ, ಶಾಲಾ-ಕಾಲೇಜು, ಸಂಘ-ಸಂಸ್ಥೆಗಳಿಗೆ ಹಾಗೂ ಕಲಾ ತಂಡಗಳಿಗೆ ವೇಷಭೂಷಣ ಒದಗಿಸಿರುವ ಇವರು ವಿದ್ಯಾರ್ಥಿಗಳಿಗೆ, ಯಕ್ಷಗಾನ ಆಸಕ್ತರಿಗೆ ನಾಟ್ಯ ಮತ್ತು ಅರ್ಥಗಾರಿಕೆಯ ತರಬೇತಿ ನೀಡಿದ್ದಾರೆ.

ಜಿಲ್ಲೆಯ ಪ್ರಸಿದ್ಧ ಯಕ್ಷಗಾನ ಕಲಾವಿದರನ್ನು ಒಟ್ಟು ಸೇರಿಸಿ ಅಲ್ಲಲ್ಲಿ ಯಕ್ಷಗಾನ, ತಾಳಮದ್ದಳೆ ಕೂಟಗಳನ್ನು ಸಂಘಟಿಸುತ್ತಿರುವ ಇವರು ಬೆಳಗಾವಿಯಲ್ಲಿ ನಡೆದ ವಿಶ್ವಕನ್ನಡ ಸಮ್ಮೇಳನದಲ್ಲಿ ಯಕ್ಷಗಾನ ತಂಡದೊಂದಿಗೆ ಭಾಗವಹಿಸಿ ಕಲಾ ಪ್ರದರ್ಶನ, ಹಂಪಿ ಉತ್ಸವದಲ್ಲಿ ಯಕ್ಷಗಾನ ಪ್ರದರ್ಶನ, ವಿಶ್ವ ಯುವಜನ ಮೇಳದಲ್ಲಿ ಯಕ್ಷಗಾನ ಪ್ರದರ್ಶನ, ರಾಜ್ಯ ಮಟ್ಟದ ಯುವಜನ ಮೇಳಗಳಲ್ಲಿ ಯಕ್ಷಗಾನ ಪ್ರದರ್ಶನ, ಆಫ್ರೀಕಾ ಶೃಂಗಸಭೆ, ದೆಹಲಿಯಲ್ಲಿ ಯಕ್ಷಗಾನ ನೃತ್ಯ ರೂಪಕ ಪ್ರದರ್ಶಿಸಿದ್ದಾರೆ, 2014ರಲ್ಲಿ ಸರಕಾರದ ಉದ್ಯೋಗ ಖಾತರಿ ಯೋಜನೆಯ ಜಾಗೃತಿ ಯಕ್ಷಗಾನ ಪ್ರದರ್ಶನ ನೀಡಿರುವ ಇವರು ಕೆದ್ದಳಿಕೆ ಸರಕಾರಿ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಶಾಲೆಯನ್ನು ರಾಜ್ಯದಲ್ಲೇ ಮಾದರಿಯಾಗಿ ರೂಪಿಸುವಲ್ಲಿ ಪ್ರಯತ್ನಿಸಿದ್ದಾರೆ.

ಸಾಧನಾ ರಾಷ್ಟ್ರೀಯ ಸಾಂಸ್ಕøತಿಕ ಪ್ರತಿಷ್ಠಾನದಿಂದ ರಾಜ್ಯ ಮಟ್ಟದ ಸುವರ್ಣ ಕರ್ನಾಟಕ ಪ್ರಶಸ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸುವರ್ಣ ಕರ್ನಾಟಕ ಜಯಂತಿ ಪ್ರಶಸ್ತಿ, ಕೆದ್ದಳಿಕೆ ಶಾಲೆಯ ಎಸ್.ಡಿ.ಎಂ.ಸಿ.ಗೆ ರಾಜ್ಯ ಮಟ್ಟದ ಉತ್ತಮ ಅಧ್ಯಕ್ಷ ಪ್ರಶಸ್ತಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಗೌರವ, ಉಜಿರೆಯ ವಿಶ್ವ ತುಳು ಸಮ್ಮೇಳನದ ಅಂಗವಾಗಿ ಮೂಡಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ನಡೆದ ಯಕ್ಷಗಾನ ಸ್ಪರ್ಧೆಯಲ್ಲಿ ಸ್ತ್ರೀ ವೇಷದಲ್ಲಿ ಪ್ರಥಮ ಪ್ರಶಸ್ತಿ ಪಡೆದಿದ್ದಾರೆ.

ಕೃಪೆ : seeandsay

Share





ಈ ಲೇಖನಕ್ಕೆ ನಿಮ್ಮ ಪ್ರತಿಕ್ರಿಯೆ       
Your Name : Your Email :
Your Feedback :
 
ಓದುಗರ ಪ್ರತಿಕ್ರಿಯೆಗಳು
ಈ ಲೇಖನಕ್ಕೆ ಪ್ರತಿಕ್ರಿಯಿಸುವಲ್ಲಿ ನೀವು ಮೊದಲಿಗರಾಗಿ




ಪೂರಕ ಲೇಖನಗಳು
 



ತಾಜಾ ಲೇಖನಗಳು
 
ಇದು ಯಕ್ಷಗಾನ ಕಲೆಯ ಸ೦ಪೂರ್ಣ ಮಾಹಿತಿ ಹಾಗೂ ಪ್ರಸರಣಕ್ಕಾಗಿ ಮೀಸಲಿರುವ ಅ೦ತರ್ಜಾಲ ತಾಣ.
ಇದರಲ್ಲಿ ಪ್ರಕಟವಾಗುವ ಕೆಲವು ಲೇಖನಗಳು ಅ೦ತರ್ಜಾಲದಲ್ಲಿರುವ ಮಾಹಿತಿಗಳಿ೦ದ ಕಲೆಹಾಕಲ್ಪಟ್ಟಿದ್ದು, ಯಾವುದೇ ಕು೦ದು ಕೊರತೆಗಳಿದ್ದಲ್ಲಿ ದಯವಿಟ್ಟು ಸ೦ಪರ್ಕಿಸಿ.
ನಮ್ಮ ಬಗ್ಗೆ  |  ಲೇಖಕರ ಬಳಗ  |  ಸ೦ಪರ್ಕಿಸಿ  |  Font Help
 
© ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ